ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ

ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ  ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ

ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.  

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು  ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ.  ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

ಕನ್ನಡದ ಮೇರುನಟಿ ಬಿ.ಸರೋಜಾದೇವಿ ನಿಧನ:  ಮುಖ್ಯಮಂತ್ರಿಗಳ ಸಂತಾಪ

ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ