ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಯಚೂರಲ್ಲಿ ಜವಳಿ ಪಾರ್ಕ್‌, ಕನಕಗಿರಿಯಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್‌: ಸಚಿವ ಸಂಪುಟ ಸಭೆ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖಾಂಶಗಳು ಇಲ್ಲಿವೆ

ಬೆಂಗಳೂರು : ರಾಯಚೂರು ತಾಲ್ಲೂಕಿನಲ್ಲಿ ₹24.50 ಕೋಟಿ ವೆಚ್ಚದ ನೂತನ ಜವಳಿ ಪಾರ್ಕ್‌, ಹಾನಗಲ್‌ ತಾಲ್ಲೂಕು ಯಳವಟ್ಟಿಯಲ್ಲಿ ₹35.07 ಕೋಟಿ ವೆಚ್ಚದಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣಾ ಘಟಕ(ಫುಡ್‌ ಪಾರ್ಕ್) ಮತ್ತು ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ₹83.79 ಕೋಟಿ ವೆಚ್ಚದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್‌ ಸ್ಥಾಪಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

· ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ

· ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜೊತೆಗೆ ವಿಲೀನಗೊಳಿಸಲು ನಿರ್ಣಯ

· ಚಿಕ್ಕಬಳ್ಳಾಪುರ ತಾಲ್ಲೂಕು ಯರಮಾರೇನಹಳ್ಳಿ ಗ್ರಾಮದ 5 ಎಕರೆ 23 ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯಪಾತ್ರೆ ಅಡುಗೆ ಮನೆ ಮತ್ತು ಹಿಂದುಳಿದ ಗ್ರಾಮೀಣ ಮಕ್ಕಳ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಇಸ್ಕಾನ್‌ಗೆ ಮಂಜೂರು

· ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸ.ನಂ.66ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಇವರಿಗೆ ಗುತ್ತಿಗೆ ನೀಡಲು ನಿರ್ಧಾರ

· ದ.ಕ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ, ಪುತ್ತೂರು ತಾಲ್ಲೂಕಿಗೆ ಮಂಜೂರು

· ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಲಾಗಿರುವ ಸಮರ್ಪಕ ಕಾರ್ಯನಿರ್ವಹಿಸದ 1,530 ಟೆಲಿಮೆಟ್ರಿಕ್‌ ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು ತೆಗೆದು ₹19.89 ಕೋಟಿ ವೆಚ್ಚದಲ್ಲಿ ಹೊಸದಾಗಿ ಅಳವಡಿಸಲು ಒಪ್ಪಿಗೆ

· ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠವನ್ನು ರೂ.10.00 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಒಪ್ಪಿಗೆ

· ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಒಳಗೊಂಡಂತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮದ ಮೂಲಕ ರೂ.166.22 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಒಪ್ಪಿಗೆ

· ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯ

· ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್, 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು ರೂ.19.05 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

· ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬಂಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಒಪ್ಪಿಗೆ

· ದ.ಕ ಜಿಲ್ಲೆ ಉಳ್ಳಾಲದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗಾಗಿ ₹17.09 ಕೋಟಿ ವೆಚ್ಚದಲ್ಲಿ ವಸತಿ ಸಹಿತ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ

· ಚಿಕ್ಕಮಗಳೂರು ಜಿಲ್ಲೆ, ನರಸಿಂಹರಾಜಪುರ ಪಟ್ಟಣದ ರಸ್ತೆಯನ್ನು ರೂ.60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಗಲೀಕರಣ ಮಾಡುವ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

· ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ತಾಲ್ಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿಯನ್ನು ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ

· ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯ 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆ (O&M) ಕಾಮಗಾರಿಯನ್ನು ರೂ.128.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ

· ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದ 4 ಕಾಮಗಾರಿಗಳನ್ನು ಒಟ್ಟು ರೂ.64.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ

· ಕಿತ್ತೂರು ತಾಲ್ಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ₹30 ಕೋಟಿ ವೆಚ್ಚದಲ್ಲಿ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಅನುಮೋದನೆ

· ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ, ಸಂಬಂಧಪಟ್ಟ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ, ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧಾರ

· ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಕಮಾನು ಸೇತುವೆ (Arch Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ನಿರ್ಧಾರ

· ಹೇಮಾವತಿ ಯೋಜನೆಯಡಿ ನಾಗಮಂಗಲ ಶಾಖಾ ನಾಲೆಯ ಸರಪಳಿಯನ್ನು 0.00 ಕಿ.ಮೀ.ನಿಂದ 78.46 ಕಿ.ಮೀ.ವರೆಗೆ ₹560 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ

· ಆರ್‌ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯನ್ನು ಅಧ್ಯಯನ ಮಾಡಿ, ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಕೈಗೊಳ್ಳಲು ನಿರ್ಧಾರ

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ