ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪ್ರತಿಭೆ ಯಾರ ಸೊತ್ತೂ ಅಲ್ಲ,ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಮೈಸೂರು ಜು 19: ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ, ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದರು. ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ.

ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ. ಸಾವು ಗ್ಯಾರಂಟಿ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ ಎಂದರು. ಮಕ್ಕಳಲ್ಲೂ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಿ ಎಂದರು.

ಸರ್ಕಾರದ ಕೆಲಸ ಜನರಿಗೆ ತಲುಪಿಸಿ

ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ತಿಳಿಸಿದರು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ