ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕುಸುಮ್‌ ಬಿ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಇಲ್ಲಿವೆ

ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್‌ಸೆಟ್‌ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ ಎಂದರು. ಈ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದ್ದು, ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ ಎಂದರು.

4.5 ಲಕ್ಷ ಅನಧಿಕೃತ ಐಪಿ ಸೆಟ್‌ಗಳ ಪೈಕಿ 2 ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್‌ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇರೆಗೆ ತರುವ ಬಗ್ಗೆ ಚರ್ಚೆ ನಡೆಸಲಾಗುವುದು. ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್‌ಫಾರ್ಮ್‌ಗಳನ್ನು ಇಲಾಖೆ ಒದಗಿಸಲಿದೆ ಎಂದು ತಿಳಿಸಿದರು.

ನೀರಾವರಿ ಪಂಪ್ ಸೆಟ್‌ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು ಫೆಬ್ರವರಿ 2025 ವರೆಗೆ ರೂ. 11720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ ಎಂದರು.

ಈ ಸಂದರ್ಭ ಇಂಧನ ಸಚಿವ ಕೆ. ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ