ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆಪಿಸಿಎಲ್‌ ಅಧ್ಯಕ್ಷನಾಗಿ ನಾನೂ ಕೂಡ ಕೆಪಿಸಿಎಲ್‌ನೌಕರರಲ್ಲಿ ಒಬ್ಬನಾಗಿದ್ದೀನಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿದ್ಯುತ್ ಉತ್ಪಾದನೆಯಲ್ಲಿ ನಾವು ಸ್ವಾವಲಂಭಿಯಾಗಲು ಕೆಪಿಸಿಎಲ್‌ ನೌಕರರ ಶ್ರಮ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು ಜು‌ 23: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಭಿಯಾಗಿದ್ದು ಇದರಲ್ಲಿ ಕೆಪಿಸಿಎಲ್‌ ನೌಕರರ ಶ್ರಮ ಅಪಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕೆಪಿಸಿಎಲ್‌ ಅಧ್ಯಕ್ಷನಾಗಿ ನಾನೂ ಕೂಡ ಕೆಪಿಸಿಎಲ್‌ ನೌಕರರಲ್ಲಿ ಒಬ್ಬನಾಗಿದ್ದೀನಿ. ಅತೀ ಹೆಚ್ಚು ಕಾಲ ಕೆಪಿಸಿಎಲ್‌ ಅಧ್ಯಕ್ಷನಾಗಿ ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿಯಾಗಿದ್ದೇನೆ ಎಂದರು. ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕೆಪಿಸಿಎಲ್‌ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡ ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ ಎಂದರು.

ನಮ್ಮ ಮೇಲೆ, ಅಧಿಕಾರಿಗಳ ಮೇಲೆ ಸಮಾಜದ ಋಣ ಇದೆ. ನಾವಾಗಲೀ, ಅಧಿಕಾರಿಗಳಾಗಲೀ ಸಮಾಜದ ಹಣದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಸಮಾಜದ ಋಣ ತೀರಿಸುವ ಕಾಳಜಿಯಿಂದ ಕೆಲಸ ಮಾಡಬೇಕಿದೆ ಎಂದರು. ನಾವು ಓದುವಾಗ ಊರಲ್ಲಿ ಕರೆಂಟ್ ಇರಲಿಲ್ಲ. ಸೀಮೆಎಣ್ಣೆ ದೀಪದಲ್ಲಿ ಓದಿ ಮೇಲೆ ಬಂದೆವು. ನಾನು 8 ನೇ ತರಗತಿಗೆ ಬಂದಾಗ ಊರಿಗೆ ಕರೆಂಟ್ ಬಂತು. ಈಗ ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣವನ್ನು ರೈತರ ಪರವಾಗಿ ಸರ್ಕಾರ ಕೊಡುತ್ತಿದೆ. ಕೆಪಿಸಿಎಲ್ ನೌಕರರ ಶ್ರಮದಿಂದ ವಿದ್ಯುತ್ ರೈತರಿಗೆ ತಲುಪುತ್ತಿದೆ ಎಂದರು.

ಪವನ, ಸೌರ, ಉಷ್ಣ, ಜಲ ವಿದ್ಯುತ್ ಉತ್ಪಾದನೆ ಜೊತೆಗೆ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದನೆ ಮಾಡುತ್ತಾ ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದ್ದು ಸ್ವಾವಲಂಬನೆ ಸಾಧಿಸಿದ್ದೀವಿ. 60 ಸಾವಿರ ಮೆ.ವ್ಯಾ ಉತ್ಪಾದನೆ ಮಾಡುವ ಗುರಿ ಎಡೆಗೆ ನಾವು ಸಾಗುತ್ತಿದ್ದೇವೆ ಎಂದರು. ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎನ್ನುವ ವರದಿಗಳು ಬಂದಿವೆ. ಈ ಸಾಧನೆ ನಾವು ಮಾಡಿದ್ದೇವೆ ಎಂದರು.

ನಮ್ಮಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇದೆ. ಇದು ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು.‌ ನಮಗೆ ಶಿಕ್ಷಣ ಸಿಕ್ಕ ಮೇಲೆ ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಶಿಕ್ಷಣ ಕಲಿತವರೂ ಜಾತಿವಾದಿಗಳಾಗಿ, ದ್ವೇಷವಾದಿಗಳಾಗುತ್ತಿದ್ದಾರೆ ಎಂದರು. ಮನುಷ್ಯರ ನಡುವೆ ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತಿ ಸಮಾಜವನ್ನು ವಿಭಜಿಸುವವರಿಂದ ನೀವೆಲ್ಲರೂ ದೂರ ವಿರಿ. ಕುವೆಂಪು ಅವರ ಆಶಯದಂತೆ ವಿಶ್ವ ಮಾನವರಾಗೋಣ ಎಂದು ಕರೆ ನೀಡಿದರು. ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ