ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜಕ್ಕೂರು ಏರೋಡ್ರೋಂ ವಿಸ್ತರಣೆ ಹಾಗೂ ಸ್ಥಳ ಬಳಕೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 03: ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದರು.

ಲಭ್ಯ ಸ್ಥಳವನ್ನು ಹೇಗೆ ಉಪಯೋಗಿಸಬೇಕು ಎಂದೂ ಚಿಂತನೆ ನಡೆಯುತ್ತಿದೆ. ವೈಮಾನಿಕ ತರಬೇತಿ ಶಾಲೆ ನಡೆಸಬೇಕೆನ್ನುವ ನ್ಯಾಯಾಲಯದ ಆದೇಶವಿದ್ದು, ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸೌಜನ್ಯ ತಾಯಿ ನಿರ್ಧರಿಸಬೇಕು

ಸರ್ವೋಚ್ಚ ನ್ಯಾಯಾಲಯಕ್ಕೆ ಸೌಜನ್ಯ ಪ್ರಕರಣವನ್ನು ಮೇಲ್ಮನವಿ ಸಲ್ಲಿಸಿದರೆ ಅದರ ವೆಚ್ಚವನ್ನು ಭರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಬಿಐ ಕೇಂದ್ರ ಸರ್ಕಾರ ಅಧೀನದಲ್ಲಿದ್ದು, ಆರೋಪಿಯನ್ನು ಖುಲಾಸೆ ಮಾಡಿದೆ. ಈಗ ಸುಪ್ರೀಂ ಕೋರ್ಟಿನ ವೆಚ್ಚ ಭರಿಸುವುದಾಗಿ ಹೇಳುತ್ತಿದ್ದಾರೆ. ಮೇಲ್ಮನವಿಗೆ ಪ್ರಕರಣ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಬೇಕು ಎಂದರು.

ರಾಜಕೀಯ ಪ್ರೇರಿತ ಯಾತ್ರೆ

ಧರ್ಮಸ್ಥಳಕ್ಕೆ ಬಿಜೆಪಿ ಮಾಡಿದ ಯಾತ್ರೆ ರಾಜಕೀಯ ಪ್ರೇರಿತ ಎಂದರು. ಧರ್ಮಸ್ಥಳ ಚಲೋ ಅಲ್ಲ, ರಾಜಕೀಯ ಚಲೋ ಎಂದು ಹೇಳಿದರು.

ಧರ್ಮಪ್ರಚಾರ ಅಲ್ಲ

ಅರಮನೆ ಮೈದಾನದಲ್ಲಿ ಅಲ್ಪಸಂಖ್ಯಾತರ ಸಮಾವೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಪ್ರವಾಸಿ ವೀಸಾ ಪಡೆದು ಧರ್ಮಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ ಆ ರೀತಿ ಏನಿಲ್ಲ. ಆಯೋಜಕರೊಂದಿಗೆ ಈ ಬಗ್ಗೆ ಮಾತನಾಡಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ