ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ, ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರವಾದಿ ಜನ್ಮ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು

ಬೆಂಗಳೂರು ಸೆ 5 : ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶದಲ್ಲಿ ಮಾತನಾಡಿದರು.

ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದರು.

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ ಎಂದರು. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಬ್ರಾತೃತ್ವ ಮತ್ತು ಪರಧರ್ಮ ಸಹಿಷ್ಣತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ಕರೆ ನೀಡಿದರು.

ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಹ್ಯಾರಿಸ್ ಸೇರಿ ಹಲವು ಗಣ್ಯರು, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ