ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿವೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಂದರ್ಭ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಹೀಗಿವೆ.

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.

ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ