ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಾಡಿನಲ್ಲೇ ಪ್ರಾಣಿಗಳಿಗೆ ಆಹಾರ, ನೀರು ಸಿಗುವಂತಾದರೆ ವನ್ಯಜೀವಿ – ಮಾನವ ಸಂಘರ್ಷ ತಡೆಯಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮಾನವರ ಅಳಿವು – ಉಳಿವು ಅಳಿವು – ಉಳಿವು ನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ರಕ್ಷಣೆಯ ಕಾರ್ಯದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ವನ್ಯಜೀವಿ – ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025” ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ತವ್ಯದ ವೇಳೆ ಹುತಾತ್ಮರಾದ ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡುತ್ತ, ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್ ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ಮಾಡಲು ನಾವು ಸ್ಪಷ್ಟ ಸೂಚನೆ ನೀಡಿದ್ದೇವೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ಧವಿದೆ. ಆದ್ದರಿಂದ ಸಮರ್ಪಕವಾಗಿ ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಬೇಕು ಎಂದರು.

ಹಿರಿಯ ಅಧಿಕಾರಿಗಳು ಆಗಿಂದ್ದಾಗೆ ಕಾಡಿಗೆ ಭೇಟಿ ನೀಡಿ, ಹೆಚ್ಚೆಚ್ಚು ಕಾಡಿನಲ್ಲೇ ಉಳಿಯಬೇಕು. ಆಗ ಮಾತ್ರ ಕೆಳ ಹಂತದ ಸಿಬ್ಬಂದಿ ಕೂಡ ಕಾಡೊಳಗೆ ಇದ್ದು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಸಲಹೆ ನೀಡಿದರು.

ಈ ಸಂದರ್ಭ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ