ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸೆ. 11ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂದರ್ಭ ತೆಗೆದುಕೊಳ್ಳಲಾದ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ.

ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರುಗಳನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು 9 ಅಥವಾ 9 ಅನ್ನು ಮೀರದಂತೆ, ಅನಿವಾರ್ಯ ಸಂದರ್ಭದಲ್ಲಿ 13ಕ್ಕೆ ಮೀರದಂತೆ ಆಯ್ಕೆಯ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್‌ ಆಸ್ಪತೆಗಳ ನವೀಕರಣ ಕಾಮಗಾರಿಗಳನ್ನು ಒಟ್ಟು ₹542 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ

 ₹12.25 ಕೋಟಿ ವೆಚ್ಚದಲ್ಲಿ 35 ಸಂಚಾರಿ ಆರೋಗ್ಯ ಘಟಕಗಳ ದುರಸ್ತಿ ಮತ್ತು ಹೊಸ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿ ಸದರಿ ವಾಹನಗಳನ್ನು Connected Health Ecosystem ಘಟಕಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘ (ನಿಯಮಿತ) ವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 1,000 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್‌ಗಳಿಗೆ ಅವಶ್ಯವಿರುವ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ₹20 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ

₹398 ಕೋಟಿಗಳ ಅಂದಾಜು ಮೊತ್ತದಲ್ಲಿ ರಾಜ್ಯದ ಆಯ್ದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳ ಅತೀ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ₹50 ಕೋಟಿಗಳ ಅಂದಾಜು ಮೊತ್ತದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ

 ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಿಂದ ಹೆಗ್ಗಾರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದ ಗಂಗಾವಳಿ ನದಿಗೆ ಅಡ್ಡಲಾಗಿ ₹35 ಕೋಟಿ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಸಿಡಿಎಸ್ ನಾಲೆಯಡಿಯಲ್ಲಿ ಬರುವ ಪಿಕಪ್‌ ಮತ್ತು ತೂಬಿನ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

₹391.82 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ಬೈರಮಂಗಲ ಕೆರೆಯ ದಡದಲ್ಲಿ 100 ಎಂಎಲ್‌ಡಿ ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಮತ್ತು 25 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ

ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ನಾಗನೂರು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹105.19 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಹಾವೇರಿ ಜಿಲ್ಲೆ ಬಂಕಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ತೆವರಮಳ್ಳಿ ಹಳ್ಳಿ ಕೆರೆ ಸುಧಾರಣಾ ಕಾಮಗಾರಿಗಳನ್ನು ₹92.84 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಮೋತಿ ತಲಾಬ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹153 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎಡವಿಹಾಳ ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ನೀರು ಎತ್ತಿ ಸುಮಾರು 10 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ₹109 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

 ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ಹೆಬ್ಬಕ್ಕವಾಡಿ ಶಾಖಾ ನಾಲೆ ಮತ್ತು ನಿಡಘಟ್ಟ ಶಾಖಾ ನಾಲೆಯ ಅಭಿವೃದ್ಧಿ ಕಾಮಗಾರಿಗಳನ್ನು ₹293.47 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊಸಹೊಳಲು ಎಡದಂಡೆ ನಾಲೆಯ ಉಳಿಕೆ ಕಾಮಗಾರಿ ಹಾಗೂ ಆಧುನಿಕರಣ ಕಾಮಗಾರಿಯನ್ನು ₹21.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

 ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್‌ ಮತ್ತು ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಯನ್ನು ₹50 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಬೆಂಗಳೂರಿನ ಯಲಹಂಕ ತಾಲೂಕು ಬೆಳ್ಳಹಳ್ಳಿಯಲ್ಲಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕೃಷಿ ಇಲಾಖೆ ಆವರಣದಲ್ಲಿ ತಲಾ ರೂ. 50 ಕೋಟಿಗಳ ಅಂದಾಜು ವೆಚ್ಚದಲ್ಲಿ ಪ್ರತ್ಯೇಕವಾಗಿ 100 ಹಾಸಿಗೆಗಳ ಸಾಮರ್ಥ್ಯದ 2 ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ಕಟ್ಟಡಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ