ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೃಷಿ ಇಲಾಖೆಗೆ ಜಂಟಿ ಸಮೀಕ್ಷೆ ವರದಿ ಬಳಿಕ ಬೆಳೆಪರಿಹಾರ ವಿತರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನ

ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ, ನಂತರ ಬೆಳೆಹಾನಿ ಪರಿಹಾರ ವಿತರಿಸುತ್ತೇವೆ. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4 ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25 ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ಸಕಾಲದಲ್ಲಿಯೇ ವರದಿ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರವೇ ಈ ಬಗ್ಗೆ ನಿಧಾನ ನಿಲುವು ತಾಳಿದ್ದರಿಂದ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ, ಪರಿಹಾರವನ್ನು ಪಡೆಯಬೇಕಾಯಿತು. ರಾಜ್ಯಕ್ಕೆ ನೀಡಲಾಗುವ ಎನ್‌ಡಿಆರ್‌ಎಫ್ ಪರಿಹಾರವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಹಲವು ಬಾರಿ ಕೋರಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತಸಚಿವರನ್ನು ಹಾಗೂ ಕೇಂದ್ರ ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲಾಗಿದ್ದರೂ, ಇದುವರೆಗೂ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದರು.

ಸಾಮಾಜಿಕ, ಶೈಕ್ಷಣಿಕ ಗಣತಿ ವಿಷಯದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದು, ರಾಜ್ಯದ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಸರ್ಕಾರ ತಿಳಿಯಬೇಕಾಗಿದೆ. ಸಮೀಕ್ಷೆ ವರದಿ ಬಂದ ನಂತರ, ಅದರಂತೆ ಸರ್ಕಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುತ್ತದೆ, ಇದು ನಮ್ಮ ಉದ್ದೇಶ. ಸಮೀಕ್ಷೆಗೆ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಿದ್ದು, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಅವರು ರಾಜ್ಯದ ಪ್ರತಿ ಮನೆಗೂ ತೆರಳಿ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ಕಳೆದ ಬಾರಿಗಿಂತ 40 ಸಾವಿರ ಶಿಕ್ಷಕರನ್ನು ಹೆಚ್ಚಾಗಿ ನಿಯೋಜಿಸಲಾಗಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ನಮ್ಮ ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸದ್ಯದಲ್ಲಿಯೇ ನೇಮಿಸಲಾಗುವುದು. ಇದರಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ. ವಿಜಯಪುರದಲ್ಲಿ ಎಸ್.ಬಿ.ಐ ಬ್ಯಾಂಕ್ ದರೋಡೆಗೆ ಬಳಸಿದ ಕಾರು ಪತ್ತೆಯಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ತಕ್ಷಣವೇ ಪತ್ತೆಹಚ್ಚುವಂತೆ ಜಿಲ್ಲಾ ಎಸ್.ಪಿ ಗೆ ಸೂಚಿಸಿದ್ದೇನೆ. ಬ್ಯಾಂಕಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಜಾಗೃತರಾಗಿರುವಂತೆ ಮಾಹಿತಿ ನೀಡಲಾಗಿದೆ. ಬ್ಯಾಂಕ್‌ಗಳಿಗೆ ಸುರಕ್ಷತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದು ಆಯಾ ಬ್ಯಾಂಕಿನ ಜವಾಬ್ದಾರಿಯಾಗಿರುತ್ತದೆ. ಪೊಲೀಸರು ಬ್ಯಾಂಕಿಗೆ ಸುರಕ್ಷತೆ ನೀಡುತ್ತಾರೆ. ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಯಾವುದೇ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ಅಂತಿಮ ತೀರ್ಮಾನ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಈ ವಿಷಯದಲ್ಲಿ ರಾಜ್ಯ ಸರ್ಕಾರ ಕೇವಲ ಶಿಫಾರಸ್ಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ಸಹ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ