ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುತ್ತ, ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ ಬಡವ ಬಲ್ಲಿದ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ‘’ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ. ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ. ಆದ್ದರಿಂದ ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬಾರದು ಎಂದರು.

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಸರಿಯಲ್ಲ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಜಾತಿ, ಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳ ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ನಾವು ನೀವೆಲ್ಲರೂ ಸೇರಿ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಬಲಪಡಿಸಲು ಶ್ರಮಿಸೋಣ ಎಂದು ಕರೆ ನೀಡಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ