ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಒಲಿಂಪಿಕ್ಸ್‌ ವಿಜೇತ ಕ್ರೀಡಾಪಟುಗಳಿಗೆ ತಲಾ ₹6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಹಾರೈಕೆಗಳು. ಸೋಲು – ಗೆಲುವುಗಳಿಗಿಂತ ಕ್ರೀಡಾಮನೋಭಾವ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ “ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ”ವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ನಾವು ಕೈಗೊಂಡಿದ್ದೇವೆ ಎಂದರು.

ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಇವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ ‌ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ. ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಲಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ