ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಎಸ್.ಎಲ್ ಬೈರಪ್ಪನವರ ನಿಧನದಿಂದ ಸಾರಸ್ವತ ಲೋಕ ಬಡವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ

ಬೆಂಗಳೂರು: ಎಸ್.ಎಲ್ ಬೈರಪ್ಪನವರ ನಿಧನದಿಂದ ಸಾರಸ್ವತ ಲೋಕ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ ಓದುಗರನ್ನು ಸಂಪಾದಿಸಿದ್ದರು. ಸಣ್ಣ ಗ್ರಾಮವೊಂದರಲ್ಲಿ ಜನಿಸಿದ ಬೈರಪ್ಪನವರು ಫಿಲಾಸಫಿಯನ್ನು ಓದಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಬೋಧನಾ ವೃತ್ತಿಯಲ್ಲಿದ್ದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದರು. ಕಾದಂಬರಿಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತಿದ್ದ ಅವರ ಕೃತಿಗಳು ಜಗತ್ಪ್ರಸಿದ್ಧವಾಗಿದ್ದವು. ನಾನು ಅವರ ಕೆಲವೊಂದು ಕಾದಂಬರಿಗಳನ್ನು ಓದಿದ್ದೇನೆ. ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರು, ಸಾಹಿತ್ಯಾಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಮೈಸೂರಿನಲ್ಲಿಯೇ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು. ಸಾಹಿತ್ಯ ಹಾಗೂ ಸ್ನೇಹ ಬೇರೆ ಬೇರೆ. ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಭೈರಪ್ಪನವರು ಜೊತೆ ನನಗೆ ಉತ್ತಮ ಬಾಂಧವ್ಯವಿತ್ತು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಭೈರಪ್ಪನವರು ನಾಡು ಕಂಡ ಶ್ರೇಷ್ಠ ಸಾಹಿತಿಗಳಾಗಿದ್ದರು. ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ