ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಭೀಮಾ ನದಿ ತೀರ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹ: ರಕ್ಷಣಾ ಕಾರ್ಯ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಕಲಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾಗೂ ಕೃಷ್ಣಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು ಹೀಗಿವೆ;

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.

ಜನ ಮತ್ತು ಜಾನವಾರುಗಳ ಪ್ರಾಣ ರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಗತ್ಯವಿರುವ ಎಲ್ಲಾ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳು, ಜಾನುವಾರುಗಳಿಗೆ ಅಗತ್ಯ ಮೇವು ಸೇರಿದಂತೆ ತಾತ್ಕಾಲಿಕ ಸೂರು ಕಲ್ಪಿಸಬೇಕು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ