ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದು ಹೇಳಿದರು.

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ