ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ. ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದರು.

144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ