ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಢ್ಯವನ್ನು ಬಿತ್ತುತ್ತಾರೆ: ಸಿಎಂ ಸಿದ್ದರಾಮಯ್ಯ

ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣವು ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ. ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ‌ ಎಂದರು.

ಬಹಳ ಹಿಂದೆಯೇ ಬಸವಾದಿ ಶರಣರು ಮೌಡ್ಯ, ಕಂದಾಚಾರಗಳ ವಿರುದ್ಧದ ಹೋರಾಟಕ್ಕೆ ಕರೆ ನೀಡಿದರು. ಆದರೆ, ಇವತ್ತಿಗೂ ಮೌಢ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಢ್ಯವನ್ನು ಬಿತ್ತುತ್ತಾರೆ. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಡ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಢ್ಯ ಮತ್ತು ಮೌಢ್ಯ ಬಿತ್ತುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.

52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈ ಕೊಡಲು ಸಿದ್ಧವಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ