ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಈಗಾಗಲೇ 28,000 ಸರ್ಕಾರಿ ಉದ್ಯೋಗಗಳನ್ನು ಭರ್ತಿ, 35 ಸಾವಿರ ಹುದ್ದೆಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ “ಬೃಹತ್‌ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನ”ವನ್ನು ಉದ್ಘಾಟನೆ

ಬೆಂಗಳೂರು: ನಮ್ಮದು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ “ಬೃಹತ್‌ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನ”ವನ್ನು ಉದ್ಘಾಟಿಸಿ, ಮಾತನಾಡಿದರು.

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷಕ್ಕೆ ಒಟ್ಟು 22 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58,892 ಮಂದಿ ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22,819 ಅಭ್ಯರ್ಥಿಗಳ ಹೆಸರನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿದೆ ಎಂದರು.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1,20,563 ಅಭ್ಯರ್ಥಿಗಳು ಭಾಗವಹಿಸಿ, 24,391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48,232 ಅಭ್ಯರ್ಥಿಗಳ ಹೆಸರನ್ನು ಅಂತಿಮ‌ ಸುತ್ತಿಗೆ ಮಾಡಲಾಗಿದೆ. ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28,000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ. ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ