ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಪಡೆಯುವುದು ಕಡ್ಡಾಯ : ಸಂಪುಟ ಸಭೆಯಲ್ಲಿ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ.

ಸಂಪುಟ ಸಭೆಯಲ್ಲಿ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ 2 ಸೀರೆಗಳಂತೆ ಒಟ್ಟು 2,79,688 ಸೀರೆಗಳನ್ನು ರೂ.13.98 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ರೂ.10.49 ಕೋಟಿ ವೆಚ್ಚದಲ್ಲಿ ಔಷಧ ಕಿಟ್‌ಗಳನ್ನು ಖರೀದಿಸಿ ಒದಗಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಮತ್ತು ಕ್ರೀಡಾ ಸಂಕೀರ್ಣವನ್ನು ರೂ. 2,350 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ

ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ 100 ಹಾಸಿಗೆಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.54.92 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ.

ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳನ್ನು ತಲಾ ರೂ.100 ಕೋಟಿಗಳ ಅನುದಾನದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ

ಸಂಜಯ್‌ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸೆ ಸಂಸ್ಥೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.26.09 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ

ವೃಷಭಾವತಿ ವ್ಯಾಲಿ ಸಂಸ್ಕರಣಾ ಘಟಕದ ಮರುಬಳಕೆ ನೀರನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ತುಂಬಿಸುವ ರೂ.650 ಕೋಟಿ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಮಳೆಯಾಶ್ರಿತ ಬೆಳೆ, ನೀರಾವರಿ ಬೆಳೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಎಸ್‌ಡಿಆರ್‌ಎಫ್‌/ ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಪ್ರತಿ ಹೆಕ್ಟೇರ್‌ಗೆ ಕ್ರಮವಾಗಿ ರೂ.8,500, ರೂ. 17,000 ಹಾಗೂ 22,500 ರೂ.ಗಳಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.8,500 ನೀಡಲು ನಿರ್ಣಯಿಸಲಾಯಿತು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ