ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ

ಫೋಟೋ ಜರ್ನಲಿಸ್ಟ್ ಗಳಿಗೆ “ಮುಖ್ಯಮಂತ್ರಿ ಕಪ್ ಪ್ರಶಸ್ತಿ” ವಿತರಣೆ ಕಾರ್ಯಕ್ರಮ

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್ ಗಳಿಗೆ “ಮುಖ್ಯಮಂತ್ರಿ ಕಪ್ ಪ್ರಶಸ್ತಿ” ವಿತರಿಸಿ ಮಾತನಾಡಿದರು. ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳುತ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಯಾರಿಗೂ ಗೌರವ ತರುವುದಿಲ್ಲ ಎಂದರು.

ಮಾಧ್ಯಮಗಳಿಂದು ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ. ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಢ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವುದು ಬೇಸರದ ವಿಚಾರ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ