ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಬೆಂಗಳೂರು: ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ, ರೈತರಿಗೆ, ಕೃಷಿಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, “ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ” ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪನವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದ್ದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುವುದು ಶ್ಲಾಘನೀಯ ಎಂದರು.

ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನಾನು ಮತ್ತೆ ಜೆ.ಹೆಚ್.ಪಟೇಲರು ಇಬ್ಬರ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದರು ಎಂದರು.

ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ‌ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್ ಗಳನ್ನು ಮಂಡಿಸುವಂತಾಯಿತು. ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ. ಅವರ ಋಣವನ್ನು ಮರೆಯಲು ಸಾಧ್ಯವೇ ಇಲ್ಲ. ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು. ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ