ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು. ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ