ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

72ನೇ ಸಹಕಾರ ಸಪ್ತಾಹ: ನೆಹರೂ ಜಯಂತಿ ದಿನ ಉದ್ಘಾಟನೆ

ಸಮಾರೋಪ ಸಮಾರಂಭವು ನವೆಂಬರ್ 20ರಂದು ಚಾಮರಾಜನಗರದಲ್ಲಿ ನಡೆಯಲಿದೆ

ಬೆಂಗಳೂರು: ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು ನವೆಂಬರ್ 20ರಂದು ಚಾಮರಾಜನಗರದಲ್ಲಿ ನಡೆಯಲಿದೆ ಎಂದರು.

“ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ “ಸಹಕಾರ ರತ್ನ” ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡುತ್ತೇನೆ ಎಂದರು.

ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೆ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ ಭಾಗವಹಿಸುತ್ತೇನೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ