ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆಎಸ್‌ಡಿಎಲ್ ಲಾಭದಲ್ಲಿ ₹135 ಕೋಟಿ ಚೆಕ್‌ ಮುಖ್ಯಮಂತ್ರಿಗಳಿಗೆ ಹಸ್ತಾಂತರ

ಕೆಎಸ್‌ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ.

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‌ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ. ಬಿ. ಪಾಟೀಲ್‌ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡ ಅವರು ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ನೀಡಿದರು.

ಕೆಎಸ್‌ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನುಸರ್ಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌, ಸಚಿವರಾದ ಕೆ. ಜೆ. ಜಾರ್ಜ್, ಪ್ರಿಯಾಂಕ್‌ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ