ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

20 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ಬಜ್ಪೆ ಗ್ರಾಮದಲ್ಲಿ ಹಜ್‌ ಭವನ ನಿರ್ಮಿಸಲು ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.

ಮುಂದಿನ 5 ವರ್ಷಗಳಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರೆ ನಗರಗಳಲ್ಲಿ ಒಟ್ಟು 25,000 ಹೆಚ್ಚುವರಿ ನವೋದ್ಯಮಗಳನ್ನು ಸ್ಥಾಪಿಸುವ ಉದ್ದೇಶದ ಕರ್ನಾಟಕ ನವೋದ್ಯಮ ನೀತಿ 2025-2030ಕ್ಕೆ ಒಪ್ಪಿಗೆ

ಮೈಸೂರಿನ ಪಿಕೆಟಿಬಿ ಆಸ್ಪತ್ರೆಯ ಆವರಣದಲ್ಲಿ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರ ನಿರ್ಮಿಸಲು ಅವಶ್ಯವಿರುವ ಉಪಕರಣಗಳನ್ನು ಮೊದಲನೇ ಹಂತದಲ್ಲಿ 36.50 ಕೋಟಿ ರೂ. ವೆಚ್ಚದಲ್ಲಿ ಹಾಗೂ ಎರಡನೇ ಹಂತದಲ್ಲಿ 58 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ

20 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ಬಜ್ಪೆ ಗ್ರಾಮದಲ್ಲಿ ಹಜ್‌ ಭವನ ನಿರ್ಮಿಸಲು ಒಪ್ಪಿಗೆ

ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ

ವಿಜಯಪುರ ನಗರದ ಸುತ್ತಲಿನ ಕೆಲವು ಕಂದಾಯ ಗ್ರಾಮಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿ ವಿಜಯಪುರ ಮಹಾನಗರ ಪಾಲಿಕೆ ಎಂದು ಘೋಷಿಸಲು ಒಪ್ಪಿಗೆ

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ

ಬೀದರ್‌ ಜಿಲ್ಲೆಯ ರಾಜೇಶ್ವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ

ಇಂದಿರಾ ಆಹಾರ ಕಿಟ್‌ನಲ್ಲಿ ಫಲಾನುಭವಿಗಳಿಗೆ ತೊಗರಿ ಬೇಳೆ 1 ಕೆ.ಜಿ., ಅಡುಗೆ ಎಣ್ಣೆ 1 ಲೀ., ಸಕ್ಕರೆ 1 ಕೆ.ಜಿ., ಉಪ್ಪು 1 ಕೆ.ಜಿ. ಹಾಗೂ 1 ಕೆ.ಜಿ. ಹೆಸರು ಕಾಳಿನ ಬದಲಿಗೆ ಅದರ ವೆಚ್ಚಕ್ಕನುಗುಣವಾಗಿ 1 ರಿಂದ 3 ಸದಸ್ಯರಿಗೆ ¼ ಕೆ.ಜಿ., 3 ರಿಂದ 4 ಸದಸ್ಯರಿರುವ ಕುಟುಂಬಕ್ಕೆ ½ ಕೆ.ಜಿ. ಹಾಗೂ 5ಕ್ಕೂ ಹೆಚ್ಚು ಸದಸ್ಯರಿರುವ ಕುಟುಂಬಕ್ಕೆ ¾ ಕೆ.ಜಿ. ತೊಗರಿ ಬೇಳೆಯನ್ನು ವಿತರಿಸಲು ತೀರ್ಮಾನ

ಹಿಂದುಳಿದ ವರ್ಗಗಳಿಗೆ ಮೀಸಲಿರುವ ಆದರೆ ಅರ್ಹ ಅಭ್ಯರ್ಥಿಗಳು ಲಭ್ಯತೆಯಿಲ್ಲದ ಕಾರಣ ಭರ್ತಿಯಾಗದೇ ಉಳಿದಿರುವ 67 ಉರ್ದು ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಸಾಮಾನ್ಯ ವರ್ಗಕ್ಕೆ ಪರಿವರ್ತಿಸಿ ಭರ್ತಿ ಮಾಡಲು ಒಪ್ಪಿಗೆ

ಬೆಂಗಳೂರಿನ ಹೆಬ್ಬಾಳದಲ್ಲಿರುವ ಕರ್ನಾಟಕ ಪಶು ಮತ್ತು ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೇರಿದ 4 ಎಕರೆ ಜಾಗವನ್ನು ಹೈಕೋರ್ಟ್‌ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕಾಗಿ ಹಸ್ತಾಂತರಿಸಲು ತೀರ್ಮಾನ

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ