ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಭಟನಾ ನಿರತ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಗಳ ಮುಖಂಡರುಗಳ ಜೊತೆ ನಡೆದ ಸಭೆ

ಬೆಂಗಳೂರು: ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ? ರೈತರು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರತಿಭಟನಾ ನಿರತ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಗಳ ಮುಖಂಡರುಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸುವವರು ಕೂಡ ಅವರೇ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರವೇ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ ಎಂದು ನೀವೇ ಹೇಳುತ್ತಿದ್ದೀರಿ, ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರಾದ ನೀವೆಲ್ಲಾ ಮನವಿ ಮಾಡಿದ್ದೀರಿ. ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ