ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ನಿರ್ಮಾಣದ ಬಗ್ಗೆ ಪರಿಶೀಲಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ದೈವಾಧೀನರಾಗಿದ್ದಾರೆ. ಅವರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮದಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು.

ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ