ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ

ಬೆಂಗಳೂರು: ಮೀನುಗಾರಿಗೆ ವಿಶೇಷ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೀನುಗಾರಿಕೆ ಇಲಾಖೆ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ. ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ