ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣದ ವಿಸ್ತೃತ ಯೋಜನಾ ವರದಿ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸಭೆ ನಡೆಸಿ, ಚರ್ಚಿಸಿದರು.

ಸಭೆಯ ಮುಖ್ಯಾಂಶಗಳು ಹೀಗಿವೆ;

2025 -26 ನೇ ಸಾಲಿನ ವಾರ್ಷಿಕ ಬಜೆಟ್ ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ.

ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನ ನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಅಧಿಕ ವಾಹನ ಸಂಚಾರವಿದ್ದು ಪುರಸಭೆಯ ಸುಪರ್ದಿಯಲ್ಲಿರುತ್ತದೆ.

ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನಾ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿರುತ್ತದೆ.

ರಸ್ತೆ ಅಗಲೀಕರಣ ಕಾಮಗಾರಿಯ ಯೋಜನಾ ವರದಿ ಪರಿಶೀಲಿಸಿ, ರಸ್ತೆಯನ್ನು 80 ಅಡಿ ರಸ್ತೆಯಾಗಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ