ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. ಇವರು 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.

ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣ ಗೌಡರು ನನಗೆ ಪರಿಚಿತರು. ಕರ್ನಾಟಕದಲ್ಲಿ ಸುಮಾರು 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ಆಶಿಸುತ್ತೇನೆ. ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ ಇರುವ 50 ಲಕ್ಷ ರೂ.ಬೇಡಿಕೆಯನ್ನು ಸಹ ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದರು.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು. ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಗಾಧರ, ಯು.ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ