ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೆಕ್ಕೆಜೋಳ ಬೆಳೆಗಾರರ ಹಿತ ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆ

ಬೆಂಗಳೂರು: ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು. ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ. ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದರು.

ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ. ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ