ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು ಎಚ್.ವೈ.ಮೇಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ

ಬೆಳಗಾವಿ: ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಗಲಿದ ಎಚ್.ವೈ.ಮೇಟಿ ಅವರಿಗೆ ಸಂತಾಪ ವ್ಯಕ್ತಪಡಿಸಿದರು.

ಮಾಜಿ ಸಚಿವರು, ಹಾಲಿ ಶಾಸಕರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರು ದೀರ್ಘ ಕಾಲ ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು ಎಂದರು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು, ಸಜ್ಜನ ರಾಜಕಾರಣಿ. ರಾಜಕೀಯ ತತ್ವಗಳನ್ನು ತಪ್ಪದೇ ಪಾಲಿಸುತ್ತಿದ್ದ ಅವರು ಜನರೊಂದಿಗೆ ಬೆರೆಯುವ ಗುಣವಿದ್ದು, ಜಾತ್ಯಾತೀತ ತತ್ವದ ಪಾಲಕರಾಗಿದ್ದರು. ಅವರು ಎಲ್ಲ ಜಾತಿ-ಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು ಎಂದು ಸ್ಮರಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ