ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ರೈತರ ಪರ ನಾಯಕನನ್ನು ಕಳೆದುಕೊಂಡಂತಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ

ಬೆಳಗಾವಿ : ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಗಲಿದ ಶಿವಶರಣಪ್ಪಗೌಡ ಪಾಟೀಲ್ ಅವರಿಗೆ ಸಂತಾಪ ಸೂಚಿಸಿದರು.

ಮಾಜಿ ಶಾಸಕ ಶಿವಶರಣಪ್ಪ ಗೌಡ ಪಾಟೀಲ್ ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದವರು. ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1999ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 11ನೇ ವಿಧಾನಸಭೆಗೆ ಚುನಾಯಿತರಾಗಿದ್ದರು. ಕ್ಷೇತ್ರದ ಜನರ ಹಾಗೂ ರೈತರ ಪರವಾಗಿ ಸದಾ ಶ್ರಮಿಸುತ್ತಿದ್ದರು. ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ಒಬ್ಬ ಮುತ್ಸದ್ದಿ ಹಾಗೂ ರೈತರ ಪರ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಸ್ಮರಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ