ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಅಪಾರ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಒಲಂಪಿಕ್ 2025ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಆಯೋಜಿಸಿದ್ದ ಕರ್ನಾಟಕ ಒಲಂಪಿಕ್ 2025ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ನಮ್ಮವರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುತ್ತಾರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದ್ದೇವೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾ ಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ