ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜೀವದ ತೊಟ್ಟಿಲಾಗಿರುವ ಭೂಮಿಯನ್ನು ಬಂಜೆ ಮಾಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಯ ಉದ್ಘಾಟನಾ ಸಮಾರಂಭ

ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ‌. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಪ್ರತಿಶತ 90 ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರಕಾರಗಳ ಜವಾಬ್ದಾರಿಯಾಗಿದೆ ಎಂದರು.

ನೀರಿನ ನಿರ್ವಹಣೆ ಕುರಿತು ಪ್ರತಿಯೊಬ್ಬರು ತಿಳಿದುಕೊಂಡು ನೀರನ್ನು ಮಿತವಾಗಿ ಬಳಸಬೇಕು. ಈ ಕುರಿತು‌ ಕೃಷಿ ಇಲಾಖೆ ಪ್ರತಿ ರೈತರ ಹತ್ತಿರ ಹೋಗಿ ಇಲಾಖೆಯಿಂದ ಪರಿಚಯಿಸಲಾಗುವ ಹೊಸ ತಳಿಗಳ ಕುರಿತು ಮಾಹಿತಿ ನೀಡಬೇಕು. ಕಳೆದ ಆಯವ್ಯಯಲ್ಲಿ ಘೋಷಿಸಿದಂತೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ರೈತರು ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಸಬ್ಸಿಡಿ ಮೂಲಕ ಹೊಸ ಯಂತ್ರೋಪಕರಣಗಳನ್ನು ವಿತರಿಸುತ್ತಿದೆ ಎಂದರು.

ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ ಮಾಡಲಾಗುತ್ತಿದೆ. ಅಲ್ಲಿನ ರೈತರು ಕೃಷಿ ಇಲಾಖೆಯಿಂದ ಜಾರಿಯಲ್ಲಿರುವ ಸಾಕಷ್ಟು ಯೋಜನೆಗಳ ಲಾಭ ಪಡೆದು ಅಭಿವೃದ್ಧಿಪರ ಕೃಷಿ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ರೈತರಿಗೆ ಹೊಸ ಹೊಸ ತಂತ್ರಜ್ಞಾನ ಬಳಕೆ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು. ಕೃಷಿಯನ್ನು ಲಾಭದಾಯಕ‌ವಾಗಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರಕಾರ ಸದಾ ಬದ್ಧವಾಗಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ