ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಮಾಜದ ಬದಲಾವಣೆಗೆ ಶ್ರಮಿಸಿದವರ ಪೈಕಿ ಶಿವರಾತ್ರಿಶ್ವರ ಶಿವಯೋಗಿ ಶ್ರೀಗಳು ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭ

ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಯಂತೋತ್ಸವಗಳು ಹಲವು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನಡೆದುಕೊಂಡು ಬರುತ್ತಿದ್ದು, ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯಲಿರುವುದು ಸಂತೋಷದ ವಿಚಾರ. ಈ ಕಾರ್ಯಕ್ರಮ ಆಯೋಜನೆಯಲ್ಲಿ ಸಹಕರಿಸಿದ ಶಾಸಕರಾದ ನರೇಂದ್ರಸ್ವಾಮಿಯವರಿಗೆ ಧನ್ಯವಾದಗಳು. ಈ ದೇಶದಲ್ಲಿ ಹಲವಾರು ಸಾಧುಸಂತರು, ಸೂಫಿ ಸಂತರು ಸಮಾಜದ ಬದಲಾವಣೆಗೆ ಶ್ರಮಿಸಿದ್ದು, ಈ ಪ್ರಯತ್ನದಲ್ಲಿ ಶ್ರೀಗಳು ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಡ್ಯ ಜಿಲ್ಲೆ ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜದಲ್ಲಿ ವಿವಿಧ ಜಾತಿ-ಧರ್ಮಗಳಿದ್ದು, ಇದು ಅಸಮಾನತೆಯ ಹುಟ್ಟಿಗೆ ಕಾರಣವಾಗಿದೆ. ಈ ಅಸಮಾನತೆ ನಿವಾರಣೆಯಾಗದೇ ಸಮಾಜದಲ್ಲಿ ಶಾಂತಿ ಸ್ಥಾಪನೆ ಅಸಾಧ್ಯ. ಬಸವಾದಿ ಶರಣರು ಮನುಷ್ಯ ಸಮಾಜ, ಸಮಸಮಾಜ ನಿರ್ಮಾಣವಾಗಬೇಕೆಂದು ಅವಿರತ ಶ್ರಮಿಸಿದರು. ಆದಾಗ್ಯೂ ಸಮಾಜದಲ್ಲಿ ಜಾತಿವ್ಯವಸ್ಥೆ ಸಂಪೂರ್ಣ ನಿರ್ಮೂಲನೆಯಾಗಿಲ್ಲ. ಕವಿ ಕುವೆಂಪು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ ಸ್ಥಾಪನೆಯಾಗಲು ಮಾನವೀಯ ಸಮಾಜ ನಿರ್ಮಾಣವಾಗಬೇಕು ಎಂದರು.

ಯಾವುದೇ ಧರ್ಮವಾಗಲಿ ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷವನ್ನು ಬೋಧಿಸುವುದಿಲ್ಲ. ಇದು ನಮ್ಮ ಸಂಸ್ಕೃತಿ. ಮನುಷ್ಯ – ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷಾಸೂಯೆ ಬಿತ್ತುವ ಅನೇಕ ಶಕ್ತಿಗಳು ಸಮಾಜದಲ್ಲಿ ಇವೆ. ಅಂತಹ ಶಕ್ತಿಗಳ ವಿರುದ್ಧ ಹೋರಾಡುವುದು ನಮ್ಮೆಲ್ಲರ ಕರ್ತವ್ಯ. ಹುಟ್ಟು ಸಾವಿನ ನಡುವಿನ ಜೀವನವನ್ನು ನಾವು ಸಾರ್ಥಕಗೊಳಿಸಿಕೊಳ್ಳಬೇಕು. ವಿದ್ಯಾವಂತರಿಗೆ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯಿರಬೇಕು. ಸಮಾಜದಲ್ಲಿ ಸಮಾಜಮುಖಿಯಾಗಿ ಬಾಳುವುದು ಮುಖ್ಯ. ಮನುಷ್ಯ ಮನುಷ್ಯರ ನಡುವಿನ ದ್ವೇಷ ಅಮಾನವೀಯ ಎಂದರು.

ಮನುಷ್ಯನ ಕಷ್ಟ ಸುಖಗಳಿಗೆ ಸ್ಪಂದಿಸುವುದೇ ದಾಸೋಹ. ದೇ. ಜವರೇ ಗೌಡ ಅವರು ಕಾಯಕ ಎಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ ಎಂದು ಹೇಳಿದ್ದರು. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು. ಒಬ್ಬರು ಉತ್ಪಾದಿಸಿದ್ದನ್ನು ಮತ್ತೊಬ್ಬರು ಅನುಭವಿಸುವಂತಾಗಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ