ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು:

2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3,510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ ರೂ. 2,040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ. ಇನ್ನೂ ರೂ. 1,205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು.

2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1,890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8,666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು.

2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8,666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಬೇಕು.

ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ