ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕ್ಯಾಲೆಂಡರ್‌ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದರು.

ಎಲ್ಲರಿಗೂ ಸಮಾನ ಅವಕಾಶ  ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಾಗ ಮಾತ್ರವೇ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯಾತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಡವರ ಒಳಿತಿಗೆ ಕರ್ತವ್ಯ ನಿರ್ವಹಿಸುವಾಗ ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕಲ್ಲದೆ, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು

ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಿ, ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ