ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರ್ಕಾರದ ಧ್ಯೇಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ದೇವಾಂಗ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘವು ನೂರು ವರ್ಷಗಳನ್ನು ಪೂರೈಸುವುದು ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಸಂಘವು ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ನಿಲಯ ವ್ಯವಸ್ಥೆ ಒದಗಿಸಲಾಗುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಮಹಿಳೆಯರು ಹಾಗೂ ಶೋಷಿತರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಪ್ರಸ್ತುತ ಲಿಂಗ ತಾರತಮ್ಯ ನೀಗುತ್ತಿದ್ದು, ದೇವಾಂಗ ಸಂಘವು ಮಹಿಳಾ ಸಬಲೀಕರಣಕ್ಕೆ ನೆರವು ನೀಡುತ್ತಿದೆ. ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯ ಮಾಡುತ್ತೇವೆ ಎಂದರು.

ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರ್ಕಾರದ ಧ್ಯೇಯ.  ಶ್ರೀಮಂತ ಇತಿಹಾಸವಿರುವ ಈ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ರೈತರು ಆಹಾರ ಪೂರೈಸಿದಂತೆ, ನೇಕಾರರು ಬಟ್ಟೆಯನ್ನು ತಯಾರಿಸುತ್ತಾರೆ. ಈ ಸಮುದಾಯದ ಸಂಘಟನೆಯಾಗುವುದು ಅಗತ್ಯ. ಸಂಘಟನೆಯ ಮೂಲಕವೇ ಶಕ್ತಿ ಬೆಳೆಯುತ್ತದೆ. ಹಿಂದುಳಿದವರು ಸಂಘಟಿಸಿದರೆ ಜಾತಿಯತೆಯಾಗುವುದಿಲ್ಲ ಎಂದು ಚಿಂತಕರಾದ ಲೋಹಿಯಾ ಅವರು ಹೇಳಿದ್ದಾರೆ. 

ದೇವಾಂಗ ಸಮುದಾಯದಲ್ಲಿರುವ ಎಲ್ಲ ಉಪಜಾತಿಗಳನ್ನು ತೆಗೆಯಬೇಕು. ಸಮುದಾಯದಲ್ಲಿ ಹಲವು ಗುಂಪುಗಳಿದ್ದರೂ, ಒಂದೇ ಶಕ್ತಿಯಾಗಿ ಸಂಘಟಿತರಾಗಬೇಕು. ಸಮಾಜದಲ್ಲಿ ಸಾಕ್ಷರತೆ ಶೇ.76 ರಷ್ಟಿದ್ದು, ಮಹಿಳೆಯರಲ್ಲಿ ಈ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. ಸಮುದಾಯದ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಜಾತಿವ್ಯವಸ್ಥೆಯಿಲ್ಲದ ಸಮಾಜವನ್ನು ನಿರ್ಮಿಸುವುದೇ ಸಂವಿಧಾನದ ಆಶಯವಾಗಿದೆ. ಎಲ್ಲ ಜಾತಿ – ಧರ್ಮದವರು ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ರೂಢಿಸಿಕೊಳ್ಳಬೇಕು. ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ನಿಮ್ಮ ಹಕ್ಕುಗಳನ್ನು ಪಡೆಯಬೇಕಿದೆ ಎಂದು ತಿಳಿಸಿದರು.

2004-05 ರಲ್ಲಿ ಹಣಕಾಸು ಸಚಿವನಾಗಿದ್ದ ಸಂದರ್ಭದಲ್ಲಿ ನೇಕಾರರಿಗೆ ತಲಾ ಯೂನಿಟ್ ಗೆ 4.20 ರೂ. ಇದ್ದ ವಿದ್ಯುತ್ ದರವನ್ನು 1.20 ರೂ.ಗಳಿಗೆ ಕಡಿತಗೊಳಿಸಿದ್ದೆ. ಈ ಯೋಜನೆಯಿಂದ ಸಮುದಾಯದ ಶೇ.80 ರಷ್ಟು ಜನರಿಗೆ ಅನುಕೂಲವಾಗಿತ್ತು. ಪ್ರಸ್ತುತ ನೇಕಾರರಿಗೆ 20 ಹೆಚ್.ಪಿ ವರೆಗೆ ರಿಯಾಯತಿ ದರದಲ್ಲಿ ವಿದ್ಯುತ್ ವ್ಯವಸ್ಥೆ ನೀಡಲಾಗುತ್ತಿದೆ. ಶೂನ್ಯಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ವ್ಯವಸ್ಥೆ, ನೇಕಾರ ಸಮ್ಮಾನ ಯೋಜನೆ ಇದೆ. ಇದರ ಲಾಭ ಪಡೆಯಬೇಕು ಎಂದು ತಿಳಿಸಿದರು. 

ದೇವರದಾಸಿಮ್ಮಯ್ಯ ಅವರ ಜಯಂತಿಯನ್ನು ಪ್ರಾರಂಭಿಸಿದ್ದು ನಮ್ಮ ಸರ್ಕಾರ. ಸಮುದಾಯದ ಜನಪ್ರತಿನಿಧಿಗಳು ಹಲವರು ಶಾಸಕರು ಮತ್ತು ಎಂಎಲ್ ಸಿ ಗಳಾಗಿದ್ದಾರೆ. ಹಿಂದುಳಿದ ಜಾತಿಗಳಿಗೆ ಜಮೀನು ನೀಡುವ ಚಿಂತನೆಯನ್ನು ಸರ್ಕಾರ ಹೊಂದಿದೆ. ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸುವ ಬೇಡಿಕೆಯಿದ್ದು, ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ