ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶಿಕ್ಷಣವಿಲ್ಲದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಿಲ್ಲ ಹಾಗೂ ಸ್ವಾಭಿಮಾನಿಗಳಾಗಿ ಬದುಕಲಾಗುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮೈಸೂರಿನಲ್ಲಿ ನಡೆದ ರಾಜ್ಯ ಕುಂಬಾರರ ಮಹಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಂಬಾರ ಸಮುದಾಯದವರು ಅತ್ಯಂತ ಹಿಂದುಳಿದ ಮತ್ತು ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದೆ. ಕಾಯಕ ಯೋಗಿಗಳಾಗಿರುವ ಕುಂಬಾರ ಸಮಾಜದವರು ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವ ಕಲೆಯ ಪರಿಣಿತಿ ಹೊಂದಿದ್ದಾರೆ. ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ. 12ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಮತ್ತು ದಾಸೋಹಗಳನ್ನು ಸಮಾಜಕ್ಕೆ ನೀಡಿದರು. ಚತುರ್ವರ್ಣ ವ್ಯವಸ್ಥೆ ಹಿಂದಿನಿಂದಲೂ ಬಂದಿರುವ ವ್ಯವಸ್ಥೆ. ಆರ್ಥಿಕವಾಗಿ ಹಿಂದುಳಿದ ಶೂದ್ರ ವರ್ಗದವರು ಜನಸಂಖ್ಯೆಯ ಸುಮಾರು ಶೇ.80 ರಷ್ಟಿದ್ದು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು. 

ಶಿಕ್ಷಣದ ಮಹತ್ವವನ್ನು ಮನಗಂಡು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿದರು. ಶಿಕ್ಷಣವಿಲ್ಲದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಿಲ್ಲ ಹಾಗೂ ಸ್ವಾಭಿಮಾನಿಗಳಾಗಿ ಬದುಕಲಾಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದ ಮೇಲೆ ಎಲ್ಲರಿಗೂ ಸಮಾನ ಅವಕಾಶಗಳು ದೊರಕಿತು. ಸ್ವಾತಂತ್ರ್ಯ ಬಂದ ನಂತರ ನಮ್ಮಲ್ಲಿ ಅನೇಕರು ವಿದ್ಯಾವಂತರಾಗಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. 

ಬೇಡರ ಜಾತಿಗೆ ಸೇರಿದ ವಾಲ್ಮೀಕಿ ರಾಮಾಯಣ ಬರೆದರು. ಬೆಸ್ತರ ಜಾತಿಗೆ ಸೇರಿದ ವ್ಯಾಸ ಮಹರ್ಷಿಗಳು ಮಹಾಭಾರತವನ್ನು ಬರೆದರು. ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ರತ್ನಪ್ಪ ಭರಮಪ್ಪ ಕುಂಬಾರರು ಸಮುದಾಯದ ಧೀಮಂತ ನಾಯಕರಾಗಿದ್ದರು ಎಂದರು. 

ಜಾತಿ ವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಗಿದೆ. ನಾನು ವಕೀಲ ಶಿಕ್ಷಣ ಪಡೆದಿದ್ದರಿಂದಲೇ ಇಂದು ಮುಖ್ಯಮಂತ್ರಿಯಾಗಿ ನಿಮ್ಮೆದುರಿರಲು ಸಾಧ್ಯವಾಗಿದೆ. ಮಹಾನ್ ಜ್ಞಾನಿಯಾಗಿದ್ದ ಶ್ರೀ ನಾರಾಯಣ ಗುರುಗಳು, ಒಂದೇ ಧರ್ಮ, ಒಂದೇ ಜಾತಿ ಎಂದು ಪ್ರತಿಪಾದಿಸಿದರು. ಅಸ್ಪೃಶ್ಯತೆಯಿಂದ ದೇಗುಲಗಳಿಗೆ ಪ್ರವೇಶ ನಿರ್ಬಂಧಿಸುತ್ತಿದ್ದ ಕಾಲದಲ್ಲಿ, ನಿಮ್ಮದೇ ದೇವಾಲಯಗಳನ್ನು ನಿರ್ಮಿಸಿಕೊಳ್ಳಿ ಎಂದು ಜನರಿಗೆ ಕರೆ ನೀಡಿದ್ದರು. 

ಕುಂಬಾರ ಸಮುದಾಯದ ಬೇಡಿಕೆಗಳನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ನೀಡಲಾಗುವುದು. ಕುಂಬಾರ ಸಮಾಜದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. 

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ