ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ:
ಕೆಕೆಆರ್ಡಿಬಿ ವತಿಯಿಂದ ₹50 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ನೂತನ ಮೆಗಾಡೈರಿ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ನಿರ್ಧಾರ
ಕೆಕೆಆರ್ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ನೂತನ ಪ್ರಾದೇಶಿಕ ಸಹಕಾರ ಭವನ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ನಿರ್ಧಾರ
ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು ₹40 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ₹12.30 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆಗೆ ಸಂಪುಟ ಸಭೆ ನಿರ್ಧಾರ
ಕೆಕೆಆರ್ಡಿಬಿ ಅನುದಾನದಡಿ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ₹66.75 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ನಿರ್ಧಾರ
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಪುತ್ಥಳಿಯನ್ನು ಸ್ಥಾಪಿಸಲು ನಿರ್ಧಾರ
ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ ಕಾಮಗಾರಿಯನ್ನು ₹70.70 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ನಿರ್ಧಾರ
ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ ಕಾಮಗಾರಿಯನ್ನು ನಬಾರ್ಡ್ ಸಹಯೋಗದೊಂದಿಗೆ ₹20 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ನಿರ್ಧಾರ
ಬೆಂಗಳೂರಿನ ಕೆಎಸ್ಡಿಎಲ್ ಸಂಸ್ಥೆಯ ಉತ್ಪಾದನಾ ಘಟಕಕ್ಕೆ ₹17.70 ಕೋಟಿ ಮೊತ್ತದಲ್ಲಿ ಸಾಬೂನು ತಯಾರಿಸುವ ಯಂತ್ರೋಪಕರಣಗಳ ಖರೀದಿಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ನಿರ್ಧರಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಜನರಿಗೆ ಎ – ಖಾತಾ ಭಾಗ್ಯ
ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ – ಖಾತಾ ನಿವೇಶನ / ಕಟ್ಟಡ / ಅಪಾರ್ಟ್ಮೆಂಟ್ಗಳಿಗೆ ಎ – ಖಾತಾ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ.
ಮಹಿಳಾ ಸುರಕ್ಷತೆಗಾಗಿ ಮಹತ್ವದ ನಿರ್ಣಯ
ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ 5 ಪೊಲೀಸ್ ಆಯುಕ್ತಾಲಯಗಳಲ್ಲಿಅಕ್ಕ ಪಡೆ ಸ್ಥಾಪನೆಗೆ ಸಂಪುಟ ಸಭೆ ನಿರ್ಧರಿಸಿದೆ.

