ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದೆದುರು ಪ್ರತಿಕ್ರಿಯಿಸಿದರು. 

ಬ್ಯಾನರ್ ತೆರವು ಬಳ್ಳಾರಿ ಘಟನೆಗೆ ಪ್ರಚೋದನೆ

ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ತಾಕತ್ತಿದ್ದರೆ ಬಳ್ಳಾರಿಗೆ ಬರುವಂತೆ ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಬಿಜೆಪಿ ಪಕ್ಷ ಪಾದಯಾತ್ರೆ ಮಾಡುವ ಅಗತ್ಯ ಏನಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. 

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ