ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. 

 ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು.

ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನ: ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ಕೊಡುಗೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ