ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ. ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದರು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ. ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು ಎಂದರು.

ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ಚಲಚಿತ್ರದಿಂದ ಸಾಧ್ಯವಿದೆ. ಸಮಾಜಮುಖಿ ಸಿನಿಮಾ ಮಾಡುವವರಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ಧತೆ ಅಭಿನಂದನೀಯ ಮತ್ತು ಅನುಕರಣೀಯ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ