ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ : ಮುಖ್ಯಮಂತ್ರಿ ಸಿದ್ದರಾಮಯ್ಯ

 ಬೃಹತ್ ಬ್ಯಾರಿ ಕೂಟ -2026 ಉದ್ಘಾಟನೆ

ಬೆಂಗಳೂರು : ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು. ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಿಸಿದರು. 

ಬ್ಯಾರಿಸ್ ಸೆಂಟ್ರಲ್ ಕಮಿಟಿ, ಬೆಂಗಳೂರು ಇವರ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಬ್ಯಾರಿ ಕೂಟ -2026 ಅನ್ನು ಮುಖ್ಯಮಂತ್ರಿ ಅವರು ಉದ್ಘಾಟಿಸಿ ಹೇಳಿದರು. 

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶದ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ ಎಂದರು. 

ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು, ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ ಎಂದು ತಿಳಿಸಿದರು. 

ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು‌ ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ. 

ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೀಡಿದ್ದೆ. ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ. ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ ಎಂದರು. 

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಾ, ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದಾರೆ. ಇಡೀ ಬ್ಯಾರಿ ಸಮುದಾಯ ಇನ್ನಷ್ಟು ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲಿ‌ ಎಂದು ಹಾರೈಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ