ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಯ್ದೆ ಜಾರಿಗೆ ತರುವ ಮುನ್ನ ರಾಜ್ಯಗಳೊಂದಿಗೆ ಚರ್ಚೆಯಾಗಿಲ್ಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ಕುರಿತಂತೆ ನಡೆದ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, 2008 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ  ಮನರೇಗಾ ಅಡಿ 31.54 ಲಕ್ಷ  ಕುಟುಂಬಗಳಿಗೆ ಕೆಲಸ ಒದಗಿಸಲಾಗಿದೆ. 13.24 ಕೋಟಿ ಮಾನವ ದಿನಗಳ ಸೃಜನೆಯಾಗಿದ್ದು, ದುಡಿಯೋಣ ಬಾ, ಕೃಷಿ ಹೊಂಡ ಅಭಿಯಾನ ಹಮ್ಮಿಕೊಂಡಿರುವ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಹೇಳಿಸಲಾಗಿತ್ತು ಎಂದರು.

ಬಸವರಾಜ ಬೊಮ್ಮಾಯಿಯವರು ಕೂಡ ಮನರೇಗಾ ಯೋಜನೆಗೆ ಹೆಚ್ಚಿನ ಒತ್ತು ನೀಡಿರುವ ಬಗ್ಗೆ ಹೇಳಿದ್ದು, ಈಗ ಇದ್ದಕ್ಕಿಂದ್ದಂತೆ ರದ್ದು ಮಾಡಲಾಗಿದೆ. ವಿಬಿ ಜಿ ರಾಮ್ ಜಿ ಯೋಜನೆಯಿಂದ ಉದ್ಯೋಗವಿಲ್ಲದೆ ಗ್ರಾಮೀಣ ಜನರು ಈಗ ವಲಸೆ ಹೋಗಲು ಪ್ರಾರಂಭಿಸಿದ್ದು, ಗ್ರಾಮೀಣ ಜನರ ಬದುಕನ್ನು ಕಸಿದುಕೊಳ್ಳುವ ಕೆಲಸವಾಗಿದೆ. ಸಾಂವಿಧಾನಿಕ ಹಕ್ಕನ್ನು ಗ್ರಾಮೀಣ ಜನರಿಂದ ಕಸಿದುಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಯ್ದೆ ಜಾರಿಗೆ ತರುವ ಮುನ್ನ ರಾಜ್ಯಗಳೊಂದಿಗೆ ಚರ್ಚೆಯಾಗಿಲ್ಲ. 60: 40 ಅನುದಾನದ ಅನುಪಾತ ತರುವ ಮುನ್ನ ಚರ್ಚೆಯಾಗಬೇಕಿತ್ತು. ಮಹಿಳೆಯರು, ಸಣ್ಣ ರೈತರು, ಆದಿವಾಸಿಗಳಿಗೆ ಆರ್ಥಿಕವಾಗಿ ಶಕ್ತಿ ಬರಬಾರದು ಎಂದು ಮನಸ್ಮೃತಿ ಹೇಳುತ್ತದೆ. ಮನುಸ್ಮೃತಿ ಪ್ರಕಾರ ಶೂದ್ರರಿಗೆ  ಆರ್ಥಿಕವಾಗಿ ಶಕ್ತಿ ಬಂದರೆ ಸೇವಕರಾಗಿ ಉಳಿಯುವುದಿಲ್ಲ. ಅದನ್ನೇ ಈಗ ಪಾಲಿಸಲಾಗುತ್ತಿದೆ ಎಂದು ತಿಳಿಸಿದರು.

ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಮನರೇಗಾ ಯೋಜನೆ ಮರುಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯಿಗಳ ಅಧಿಕಾರ ಪುನರ್ ಸ್ಥಾಪನೆಯಾಗಬೇಕು. ದೇಶಾದ್ಯಂತ ಕನಿಷ್ಠ 400 ರೂ.ಗಳ ವೇತನ ನೀಡಬೇಕು ಎನ್ನುವುದು ನಮ್ಮ ಬೇಡಿಕೆ. ಮಹಾತ್ಮ ಗಾಂಧಿ ಹೆಸರು ತೆಗೆದುಹಾಕಿ ಅವರಿಗೆ ಪುನಃ ಅವಮಾನ ಮಾಡಬಾರದು. ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳಿಗೆ ಈ ಮನವಿಯನ್ನು ಕಳುಹಿಸಿಕೊಡಲಾಗುವುದು ಎಂದರು. 

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ