ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದರು. 

ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಅಲ್ಲದೇ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ. ಶಾಸಕ ಎನ್.ಎಚ್.ಕೋನರಡ್ಡಿ ನಿಷ್ಠಾವಂತ ಕೆಲಸಗಾರ, ಪ್ರಾಮಾಣಿಕ ಶಾಸಕರಾಗಿದ್ದಾರೆ. ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣ ಎಂದು ತಿಳಿಸಿದರು. 

ಈ ಹಿಂದೆ ರೂ.1610 ಕೋಟಿ ಅಂದಾಜು ವೆಚ್ಚದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ವಿಳಂಬ ಮಾಡಿದ ನಂತರ ರೂ.200 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತಿದೆ. ಈ ಹಳ್ಳದ ಪ್ರವಾಹದಿಂದ ಸುಮಾರು 37 ಹಳ್ಳಿಗಳು ಹಾಗೂ 20 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ತೊಂದರೆ ಉಂಟಾಗುತ್ತಿತ್ತು. ಜೊತೆಗೆ ರೂ.150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಸುಳ್ಳು ಹರಡಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು. ಕೇಂದ್ರ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ. ಕೇಂದ್ರ ವನ್ಯಜೀವಿ ಮಂಡಳಿಯು ಬೇಗನೆ ಅನುಮತಿ ನೀಡಬೇಕು ಎನ್ನುವುದು ನಮ್ಮಒತ್ತಾಯ ಎಂದರು.

ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಕೊಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ. ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಬಣ್ಣಿಸಿದ್ದರು ಎಂದು ತಿಳಿಸಿದರು. 

2005 ರಲ್ಲಿ ಮನರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಈ ಮೂಲಕ ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ.

ನಾವು ನಂಬಿಕೆ ಇಟ್ಟಿಕೊಂಡಿದ್ದು ಮನುಷ್ಯ ಧರ್ಮ, ಮಾನವೀಯತೆ ಧರ್ಮ. ಬಸವಣ್ಣನವರು ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯಾ.‌.. ಎಂದು ಹೇಳಿದ್ದಾರೆ. ಸುಮಾರು 1.16 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ‌ ಯೋಜನೆಗೆ ವ್ಯಯಿಸಲಾಗಿದೆ. ಪ್ರತಿ ಕುಟಂಬಕ್ಕೆ 4-5 ಸಾವಿರ ಪ್ರತಿ ತಿಂಗಳು ನೀಡಲಾಗುತ್ತಿದೆ. ವರ್ಷಕ್ಕೆ 50 ಸಾವಿರ ಹಣ ನೇರವಾಗಿ ಮುಟ್ಟಲಿದೆ. ಸುಮಾರು 25 ಸಾವಿರ ಕೋಟಿ ನೀರಾವರಿಗೆ ಖರ್ಚು ಮಾಡಲಾಗಿದೆ. 4.5 ಲಕ್ಷ ಕೋಟಿಗೂ ಹೆಚ್ಚು ಹಣ ಕೇಂದ್ರಕ್ಕೆ ಕೊಡುತ್ತಿದ್ದೇವೆ. ಆದರೆ ಕೇಂದ್ರದಿಂದ 60 ಸಾವಿರ ಕೋಟಿ ಮಾತ್ರ ರಾಜ್ಯಕ್ಕೆ ಮರಳುತ್ತಿದೆ ಎಂದರು. 

ಮನರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇವೆ. ಮನರೇಗಾ ಅಡಿ ಕೆಲಸ ಮಾಡುತ್ತಿದ್ದವರಲ್ಲಿ ಶೇ. 53 ಮಹಿಳೆಯರು, ಶೇ.17 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 11ರಷ್ಟು ಪರಿಶಿಷ್ಟ ಪಂಗಡ ವರ್ಗದವರಿದ್ದಾರೆ. ಇವರೆಲ್ಲರೂ ವಿಬಿ ಜಿ ರಾಮ್ ಜಿ‌ ಇಂದ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ