ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಯಾವುದೇ ಧರ್ಮ – ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. 

ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು. ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು..

ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದೇನೆ. ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ.  ಯಾವುದೇ ಧರ್ಮ – ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆತಾಗ ಮಾತ್ರ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ