ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಕೆ.ಎಚ್‌ ಪಾಟೀಲ್‌ ಮಾಡದಿರುವ ಕೆಲಸವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಾಮಾನ್ಯ ಗ್ರಾಮದಲ್ಲಿ ಹುಟ್ಟಿ ಪಂಚಾಯತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕೆ. ಎಚ್. ಪಾಟೀಲ್ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 

ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ಸಹಕಾರಿ ರಂಗದ ಭೀಷ್ಮ ಕೆ ಎಚ್ ಪಾಟೀಲರ ಜಯಂತಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಇವರು ಮಾಡದಿರುವ ಕೆಲಸವಿಲ್ಲ. ಸಹಕಾರಿ ಕ್ಷೇತ್ರ ಮಾತ್ರವಲ್ಲದೆ, ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು. ದೇವರಾಜ ಅರಸು, ವೀರೇಂದ್ರ ಪಾಟೀಲ್ ಹಾಗೂ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಮಾಡಿದ್ದರು ಎಂದರು. 

ಕೆ.ಹೆಚ್.ಪಾಟೀಲರ ಸಂಪರ್ಕ ರಾಜಕೀಯವಾಗಿ ಕಡಿಮೆಯಿದ್ದರೂ ಅವರು ಸಚಿವರಾಗಿ ಮಾಡುತ್ತಿದ್ದ ಕೆಲಸವನ್ನು ಗಮನಿಸುತ್ತಿದ್ದೆ. ಓದು ಕಡಿಮೆಯಿದ್ದರೂ ಜನಪರವಾದ ಅಪಾರ ಕಾಳಜಿಯನ್ನು ಹೊಂದಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ  ಬಡವರು, ದಲಿತರು, ಅಲ್ಪಸಂಖ್ಯಾತರಲ್ಲಿ ಶಕ್ತಿ ತುಂಬುವ ಕೆಲಸ ಮಾಡಿದ್ದನ್ನು ನಾವು ಸ್ಮರಿಸಲೇಬೇಕು. ಕೆ.ಎಚ್.ಪಾಟೀಲ್‌ರ ಪುತ್ರ, ಸಚಿವರೂ ಆದ  ಹೆಚ್.ಕೆ.ಪಾಟೀಲರು ಅವರ ತಂದೆಯವರು ನಡೆದ ದಾರಿಯಲ್ಲೇ ನಡೆಯುತ್ತಿದ್ದು, ಅವರಿಗಿಂತಲೂ ಹೆಚ್ಚು ಬೆಳೆಯಲಿ ಎಂದು ಹಾರೈಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ